ಕಡಕೋಳದಲ್ಲಿ  ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯ ದರ್ಪಣ ನ್ಯೂಸ್….

ಕಡಕೋಳದಲ್ಲಿ  ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ.

ತಾಂಡವಪುರ ಮಾರ್ಚ್ 24: ಮೈಸೂರು ತಾಲ್ಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕಡಕೋಳದ ಜೈನ ಭವನದಲ್ಲಿ ರಾಜ್ಯ ಸರ್ಕಾರದ ಕಟ್ಟಡ ಕಾರ್ಮಿಕರ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೋಳ್ಳಲಾಗಿತ್ತು.

ಈ ಶಿಬಿರದಲ್ಲಿ ಸುಮಾರು 180ಕ್ಕೂ ಹೆಚ್ಚು ಕಾರ್ಮಿಕ ಕುಟುಂಬದವರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮವನ್ನು ಉದ್ಘಾಟಿಸಿದ  ಕಡಕೋಳ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಕುಮಾರಸ್ವಾಮಿ ಅವರು ಮಾತನಾಡಿ ರಾಜ್ಯ ಸರ್ಕಾರದ ಕಟ್ಟಡ ಕಾರ್ಮಿಕರ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಕಟ್ಟಡ ಕಾರ್ಮಿಕರು ಇಲಾಖೆಯ ಯೋಜನೆಗಳನ್ನು ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ತಿಳಿಸಿದರು

ಅಲ್ಲದೆ ಇಂತಹ ಕಾರ್ಯಕ್ರಮಗಳು ಗ್ರಾಮೀಣ ಭಾಗದಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ನಡೆಸಿ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ಕಾರ್ಯಕ್ರಮದ ಆಯೋಜಕರಲ್ಲಿ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಕಾರ್ಮಿಕ ಇಲಾಖೆಯ ನಂದನ್ ಮಾತನಾಡಿ ಈ ಒಂದು ಉಚಿತ ಆರೋಗ್ಯ ಶಿಬಿರದಲ್ಲಿ ಸುಮಾರು 180ಕ್ಕೂ ಹೆಚ್ಚು ಕಾರ್ಮಿಕ ಕುಟುಂಬದವರು ಹಾಗೂ ಕಾರ್ಮಿಕರು ಭಾಗಿಯಾಗಿ ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಕಾರ್ಮಿಕರಿಗೆ ಬಿಪಿ ಇರಬಹುದು ಶುಗರ್ ಇರಬಹುದು ಹೃದಯ ಸಂಬಂಧಿ ಕಾಯಿಲೆ ಇರಬಹುದು ಕಣ್ಣಿನ ತೊಂದರೆ ಇರಬಹುದು ಇನ್ನಿತರ ಎಲ್ಲ ಸಮಸ್ಯೆಗಳ ತಪಾಸಣೆ ಮಾಡಿ ಅವರಿಗೆ ಇನ್ನು 15 ದಿನದಲ್ಲಿ ಇದೇ ಜಾಗದಲ್ಲಿ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.

ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಡಕೋಳ ಶ್ರೀಕಂಠ ತೊಂಡೆಗೌಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಹಾಗೂ ಪ್ರೇಮ ಗ್ರಾಮದ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಕಡಕೋಳ ಕುಮಾರಸ್ವಾಮಿ, ಚಾಪೆ ನೇಕಾರರ ಸಹಕಾರ ಸಂಘದ ಉಪಾಧ್ಯಕ್ಷ ಎಲ್ ನಾಯಕ ಮುಖಂಡರಾದ ನಾರಾಯಣ ನಾಯಕ ರಫೀಕ್ ಪಾಷಾ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯ ಮಹೇಶ್ ಗುತ್ತಿಗೆದಾರರು ಹಾಗೂ ಮೈಸೂರು ಜಿಲ್ಲಾ ಕಾರ್ಮಿಕ ವಿಭಾಗದ ಕಾರ್ಯಧ್ಯಕ್ಷ ಕಡಕೋಳ ಭರತ್ ಕಾರ್ಮಿಕ ಇಲಾಖೆಯ ನಂದನ್ ಮುಖಂಡರಾದ ಶಿವಲಿಂಗ ಪಿ ಶ್ರೀಕಂಠಸ್ವಾಮಿ ಕಾಳೇಗೌಡ ಜೈನ ಸಮಾಜದ ಮುಖಂಡ ಯೋಗೇಂದ್ರ ರಾಮಚಂದ್ರ ಮಹಾದೇವ ಹಾಗೂ ಬೆಂಗಳೂರಿನ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ವರ್ಗದವರು ಕಾರ್ಮಿಕರು ಮುಖಂಡರುಗಳು ಹಾಜರಿದ್ದರು.