ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್….

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವ ದೊಡ್ಡ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ತಾಂಡವಪುರ ಏಪ್ರಿಲ್ 10:  ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಗೌತಮಿ ಪಂಚ ರಥೋತ್ಸವ ದೊಡ್ಡ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬಂದು ರಥೋತ್ಸವಕ್ಕೆ ಭಕ್ತರು ಹಣ್ಣು ದವನ ಎಸೆದು ದೇವರ ಕೃಪೆಗೆ ಪಾತ್ರರಾಗಿ ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.

ರಥೋತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್  ನಾನು ಜನ ಪ್ರತಿನಿದಿ ಆದಮೇಲೆ ಎರಡನೇ ಬಾರಿಗೆ ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದಿರುವುದು ನನ್ನ ಪುಣ್ಯ ಎಂದು ಹೇಳಿದ ಶಾಸಕರು ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಸನಾಗಲಿ ರಾಜ್ಯದ ಜನತೆ ಆರೋಗ್ಯ ಐಶ್ವರ್ಯ ಸುಖ ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ದೇವಾಲಯದ ಕಾರ್ಯನಿರ್ವಾಧಿಕಾರಿ ಜಗದೀಶ್ ಕುಮಾರ್ ಸಹಾಯಕ ಅಧಿಕಾರಿ ಸತೀಶ್ ತಾಲೂಕು ದಂಡಾಧಿಕಾರಿ ಶಿವಕುಮಾರ್ ಪುರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಜರಾಲ್ಡ್ ರಾಜೇಶ್ ಸೇರಿದಂತೆ ಲಕ್ಷಾಂತರ ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು