ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ವಿಜಯ ದರ್ಪಣ ನ್ಯೂಸ್……
ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಶಿಡ್ಲಘಟ್ಟ : ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢ
ಶಾಲೆಯಲ್ಲಿ 2009-2010 ನೇ ಸಾಲಿನಲ್ಲಿ ಹತ್ತನೇ ತರಗತಿ
ವಿದ್ಯಾಭ್ಯಾಸ ಮಾಡಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಶಿವಶಂಕರ್, ಶಿಕ್ಷಕರಿಂದ ಹಾಗೂ ಹಳೇ ವಿದ್ಯಾರ್ಥಿಗಳಿಂದ ಗಿಡ ನೆಡುವ
ಮೂಲಕ ಉದ್ಘಾಟನೆ ಮಾಡಲಾಯಿತು.
ಹಳೆಯ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿಯರಿಂದ ಸರ್ಕಾರಿ ಶಾಲೆ ಉಳಿವಿಗಾಗಿ ಶಾಲೆಯ ವಿದ್ಯಾರ್ಥಿಗಳಿಗೆ 10 ಸೈಕಲ್ ಗಳನ್ನು ವಿತರಣೆ ಮಾಡಿದರು.
2009-2010 ಸಾಲಿನ ಶಿಕ್ಷಕ ,ಶಿಕ್ಷಕಿಯರಾಗಿ ಕಾರ್ಯನಿರ್ವಹಿಸಿದ ಗುರುಗಳನ್ನು ಹಳೇ ವಿದ್ಯಾರ್ಥಿಗಳಿಂದ ಶಾಲು ಹೊದಿಸಿ ಹಾರ ಹಾಕಿ ಸನ್ಮಾನ ಮಾಡಿ ಗೌರವಿಸಲಾಯಿತು, ಶಿಕ್ಷಕಿಯರಿಗೆ ಬಾಗಿನವನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಆರ್.ಶೋಭಾ, ಭಾರತಿ ಕೇಶವಭಂಡಾರಿ,ಜಿ.ಎಸ್.ಸೌಭಾಗ್ಯ ,ಆರ್.ಹೇಮಾವತಿ,ಮಮತಾ, ಶಿಕ್ಷಕರಾದ ಶಿವಶಂಕರ್,ಎಸ್.ಯರಣ್ಣ ವೈ.ಟಿ.ಪವನ್ ಶೆಟ್ಟಿಗೌಡ,ಎಂ.ರಾಜಣ್ಣ,ಎಂ.ಮುನಿವೆಂಕಟರಮಣಪ್ಪ, ವಿಠಲ್,ಎ.ವಿ.ನವೀನ್ ಕುಮಾರ್ ಹಾಗೂ ಹಳೇ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಹಾಜರಿದ್ದರು.
@@@@@@@@@@@@@@@@@@@@
ಕೇರಂ ಸಿಂಗಲ್ಸ್ ಮತ್ತು ಡಬಲ್ಸ್ ” ನಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕ ಸುಂದರಚಾರಿ
ಶಿಡ್ಲಘಟ್ಟ : 2024 – 25 ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ” ಕೇರಂ ಸಿಂಗಲ್ಸ್ ಮತ್ತು ಡಬಲ್ಸ್ ” ನಲ್ಲಿ ಪ್ರಥಮ ಸ್ಥಾನ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರು ಹಾಗು ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳು
ಆದ ಆರ್.ಸುಂದರಚಾರಿ ಅವರು 16 ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಹಾಗು ಚಿಕ್ಕಬಳ್ಳಾಪುರ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದು ಸಾರ್ವಜನಿಕರ ಹಾಗು ಶಿಕ್ಷಕರ ವೃಂದದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.