ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆ
ವಿಜಯ ದರ್ಪಣ ನ್ಯೂಸ್….
ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ ಶಾಸಕ ಬಿಎನ್ ರವಿಕುಮಾರ್
ಶಿಡ್ಲಘಟ್ಟ : ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವನದ ಗುದ್ದಲಿ ಪೂಜೆ ಹಾಗು ಜಯಂತಿಯನ್ನು ಏಪ್ರಿಲ್ -14 ರಂದು ಅದ್ಧೂರಿಯಾಗಿ ನಡೆಸಲು
ತಾಲ್ಲೂಕು ಆಡಳಿತ ಸಕಲ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಕೈಗೊಂಡಿದ್ದು ಶಾಸಕ ಬಿ.ಎನ್.ರವಿಕುಮಾರ್ ರವರು ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು ಅದೇ ದಿನದಂದು ನೌಕರರ ಭವನ, ಗುರುಭವನವೂ ಸಹಾ ಗುದ್ದಲಿ ಪೂಜೆ ನೆರವೇರಲಿದ್ದು ಇದು ಐತಿಹಾಸಿಕ ಕ್ಷಣ ಎಂದರು.
ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ದಲಿತ ಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಗರದ ತೋಟಗಾರಿಕೆ ಕಚೇರಿ ಆವರಣದ ಸ್ಥಳದಲ್ಲಿ ಬಹುಕಾಲದ ಕನಸು ಸಾಕಾರವಾಗುತ್ತಿದೆ ಕಳೆದ 30 ವರ್ಷಗಳಿಂದ ದಲಿತಪರ ಸಂಘಟನೆಗಳು ಈ ಬೇಡಿಕೆಯನ್ನು ಮುಂದಿಟ್ಟಿದ್ದರು ಅದು ಈಗಫಲಪ್ರದವಾಗುತ್ತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸನೀಯವಾದ ಮಾತುಗಳು ಕೇಳಿ ಬರುತ್ತಿವೆ.
ಈ ಸಂದರ್ಭದಲ್ಲಿ ತಹಶಿಲ್ದಾರ್ ಬಿ. ಎನ್.ಸ್ವಾಮಿ,ತಾಲ್ಲೂಕು ಪಂಚಾಯತಿ ಇಒ ಹೇಮಾವತಿ ಪಿ.ಎಲ್.ಡಿ.ಬ್ಯಾಂಕ್ ಅದ್ಯಕ್ಷ ಬಂಕ್ ಮುನಿಯಪ್ಪ,ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅದ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ,ಜಾಗೃತಿ ಸಮಿತಿ ಸದಸ್ಯ ಮಂಜುನಾಥ್, ಮುಖಂಡರಾದ ಪಿಳ್ಳಪ್ಪ,
ಕೆ.ಎಸ್.ಮಂಜುನಾಥ್,ಎಸ್.ಎಂ.ರಮೇಶ್,
ಭಕ್ತರಹಳ್ಳಿ ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು.