ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್ ‌…

ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್

ದೊಡ್ಡಬಳ್ಳಾಪುರ ಬೆಂ.ಗ್ರಾ.ಜಿಲ್ಲೆ, ಏಪ್ರಿಲ್ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಜೊತೆಗೆ ಸಾಥ್ ನೀಡಿದರು.

ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ ಪಡೆದಿದೆ, ಸಾಕಷ್ಟು ಭಕ್ತರು ಇಲ್ಲಿಗೆ ಪ್ರತಿ ದಿನ ಆಗಮಿಸುತ್ತಾರೆ. ಈಗಾಗಲೇ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.