ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ.
ಬೆಂಗಳೂರು ಗ್ರಾಮಾಂತರ ಜಿಲ್ಲೆ,. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 13630 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 13 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾಗಿದ್ದ 13617 ವಿದ್ಯಾರ್ಥಿಗಳಲ್ಲಿ 13138 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 466 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.ನೆಲಮಂಗಲ ತಾಲ್ಲೂಕಿನ ಸೆಂಚುರಿ ಪ್ರೌಢಶಾಲೆಯ ವಿದ್ಯಾರ್ಥಿ ನಿಶಾಂತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ…