ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ
ವಿಜಯ ದರ್ಪಣ ನ್ಯೂಸ್…. ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ -2025 ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ ಬೆಂ.ಗ್ರಾ. ಜಿಲ್ಲೆ ಜ.22: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…