ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಅನುಭವ ಪಡೆಯಲಿ…..
ವಿಜಯ ದರ್ಪಣ ನ್ಯೂಸ್…. ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಅನುಭವ ಪಡೆಯಲಿ….. ಸನ್ಮಾನ್ಯ ಮುಖ್ಯಮಂತ್ರಿಗಳೇ, ಒಮ್ಮೆ ವೇಷ ಮರೆಸಿಕೊಂಡು ಚಿಂಚೋಳಿ ತಾಲ್ಲೂಕಿನ ಒಂದು ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆಂದು ದಾಖಲಾಗಿ ನೋಡಿ, ದಯವಿಟ್ಟು,…... ಮಾನ್ಯ ಗೃಹಮಂತ್ರಿಗಳೆ ಒಮ್ಮೆ ಅಪರಿಚಿತರಂತೆ ಶಿಕಾರಿಪುರ ತಾಲ್ಲೂಕಿನ ಯಾವುದಾದರೂ ಒಂದು ಪೋಲಿಸ್ ಸ್ಟೇಷನ್ನಿನ್ನಲ್ಲಿ ನಿಮ್ಮ ಮೇಲೆ ರಾಜಕಾರಣಿಯೊಬ್ಬನಿಂದ ಹಲ್ಲೆಯಾಗಿದೆಯೆಂದು ದೂರು ಕೊಟ್ಟು ನೋಡಿ, ದಯವಿಟ್ಟು…… ಮಾನ್ಯ ಆಹಾರ ಸಚಿವರೆ, ಒಮ್ಮೆ ಹಿರಿಯೂರಿನಲ್ಲಿ ಯಾರಿಗೂ ನಿಮ್ಮ ಪರಿಚಯ ಗೊತ್ತಾಗದಂತೆ ರೇಷನ್ ಅಂಗಡಿಯಲ್ಲಿ ಸೆಕ್ಯುರಿಟಿಯಾಗಿ…