ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ರಾಜಿನಾಮೆಗೆ ಆಗ್ರಹ
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೆಪ್ಟೆಂಬರ್ 30: ಖಾಸಗಿ ಮೆಡಿಕಲ್ ಕಾಲೇಜು ವಿಚಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದು, ಈ ಮೂಲಕ ರಾಜ್ಯದ ವೈದ್ಯಕೀಯ ಶಿಕ್ಷಣವನ್ನೇ ಅಯೋಮಯ ಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ- ಪಂಗಡ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಿಚಾರದಲ್ಲಿನ ಗೊಂದಲಗಳಿಗೆ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಹೊಣೆಯಾಗಿದ್ದು ಸಚಿವ ಶರಣ್ ಪಾಟೀಲ್ ಅವರು ಕೂಡಲೇ…