ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಂಸದ ಬಿ.ಎನ್.ಬಚ್ಚೇಗೌಡ
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17, ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು….