ದಸರಾ ಕ್ರೀಡಾಕೂಟ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 08 2023-24 ನೇ ಸಾಲಿನ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 21 ರಂದು ಜಿಲ್ಲೆಯಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ 2023-24ನೇ ಸಾಲಿನ ತಾಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ…