ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ
ವಿಜಯ ದರ್ಪಣ ನ್ಯೂಸ್ ದೆಹಲಿ ಸೆಪ್ಟೆಂಬರ್ 19 ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ. ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ. ಈ ಮಸೂದೆಗೆ ನಾರಿ ಶಕ್ತಿ ವಂದನ್ ಮಸೂದೆ ಎಂದು ಹೆಸರಿಡಲಾಗಿದೆ. ಶಾಸ್ತ್ರದಲ್ಲಿ ಹೇಳಿರುವಂತೆಯೇ…