ಜನ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್ ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್ ಘಾಟಿ…