ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಶಿವಶಂಕರ ಸೂಚನೆ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 25 ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ವಿಧ್ಯುಕ್ತವಾಗಿ ಚಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 101 ಕೇಂದ್ರಗಳಲ್ಲಿ ಹಾಗೂ ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಜಿಲ್ಲೆಯ ನೋಡೆಲ್ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್…

Read More

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ……

ವಿಜಯ ದರ್ಪಣ ನ್ಯೂಸ್  ” ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ……” ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ… ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ ಭಕ್ತಿಗೂ, ಮಾನವೀಯತೆಗೂ ಇದರಿಂದ ಒಂದು ಅರ್ಥ ಬರುತ್ತದೆಯಲ್ಲವೇ….. ಯೋಚಿಸುವ ಸರದಿ ನಮ್ಮದು…… ಒಂದು ಸಾಂಸ್ಕೃತಿಕ…

Read More

ಬಿ.ಎಡ್ ಹಾಗೂ ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ.

  ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22  2023-24ನೇ ಸಾಲಿನಲ್ಲಿ ಬಿ.ಎಡ್ & ಡಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ದಿನಾಂಕ 2023 ರ ಆಗಸ್ಟ್ 21 ರಿಂದ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು 2023 ರ ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರಿಂದ ಧೃಡೀಕರಿಸಿ, ಹಾರ್ಡ್ ಪ್ರತಿಯನ್ನು ಜಿಲ್ಲಾ ಕಛೇರಿ,…

Read More

ಅಖಿಲ ಕರ್ನಾಟಕ ಮಿತ್ರ ಸಂಘದಿಂದ ದೇವರಾಜ್ ಅರಸ್ ಜಯಂತಿ ಆಚರಣೆ.

ವಿಜಯ ದರ್ಪಣ ನ್ಯೂಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಆಗಸ್ಟ್ 21 ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ರಾಜ್ಯದ ಮೊದಲನೇ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಾಲದಿಂದ  ಕಾಲದ ಇಲ್ಲಿಯವರಿಗೂ ಅವರದೇ ಆದ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಿಸಬೇಕಾದರೆ ಅನೇಕ ಕಷ್ಟಗಳನ್ನು ಅನುಭವಿಸಿ ಆ ಸುವರ್ಣ ಸೌಧವನ್ನು ಲೋಕಾರ್ಪಣೆ ಮಾಡಿದರು. ಎಂದು ಚಿ.ಮಾ ಸುಧಾಕರ್ ರವರು ತಿಳಿಸಿದರು.   ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದಲ್ಲಿರುವ ಇಂದಿರಾ ನಗರದ…

Read More

ಹೊಸಕೋಟೆ ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ತುಂಬಿಸುವ ಏತ ನೀರಾವರಿ ಕಾಮಗಾರಿ ಚುರುಕುಗೊಳಿಸಿ: ಸಣ್ಣ ನೀರಾವರಿ ಸಚಿವ ಎನ್‌ ಎಸ್‌ ಬೋಸರಾಜು ಸೂಚನೆ.

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್‌ 21  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೆರೆಗಳಿಗೆ ಸಂಬಂಧಿಸಿದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಿ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ  ಎನ್.ಎಸ್‌ ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

Read More

ರಾಜ್ಯದ ಅಭಿವೃದ್ಧಿಯಲ್ಲಿ ದೇವರಾಜು ಅರಸು ಅವರ ಕೊಡುಗೆ ಅಪಾರ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು ,ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 20  ದೇವರಾಜ ಅರಸು ಅವರು ಶೋಷಿತ ವರ್ಗದ ಎಲ್ಲಾ ಬಡವರ ಜೀವನ ಸುಧಾರಣೆಗಾಗಿ ಶ್ರಮಿಸಿದವರು, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ…

Read More

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 19  2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ / ರಾಷ್ಟ್ರೀಯ/ರಾಜ್ಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. ಪ್ರೋತ್ಸಾಹಧನವನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡುವುದು. ಅಂತರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದ…

Read More

ಆಗಸ್ಟ್ 20 ರಂದು ಡಿ. ದೇವರಾಜ ಅರಸು 108ನೇ ಜನ್ಮದಿನಾಚರಣೆ.

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ . ಆಗಸ್ಟ್ 18 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 20 ರಂದು ಬೆಳಗ್ಗೆ 10.00 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಹಿಂಭಾಗ ಇರುವ ಡಿ‌.ದೇವರಾಜು ಅರಸು ಭವನದಲ್ಲಿ ಡಿ.ದೇವರಾಜು ಅರಸುರವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯಹಾರಗಳ ಸಚಿವರು ಹಾಗೂ…

Read More

ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋಟರಿ ಸಂಸ್ಥೆ ಮಹತ್ವದ ಪಾತ್ರ ವಹಿಸಿದೆ.

ವಿಜಯ ದರ್ಪಣ ನ್ಯೂಸ್ ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 18 ವಿಜಯಪುರ ಪಟ್ಟಣದ ರೋಟರಿ ಸಂಘದ ಆಶ್ರಯದಲ್ಲಿ ಇನ್ಸ್ಟ್ರಾಕ್ಟ್ ಪದವಿ ಸ್ವೀಕಾರ ಸಮಾರಂಭ ಸುಬ್ಬಮ್ಮ ಚನ್ನಪ್ಪ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.ರೋಟರಿ ಸಂಸ್ಥೆಯು 50 ವರ್ಷದ ಸಂಭ್ರಮದಲ್ಲಿ ನಮ್ಮ ಪಟ್ಟಣದಲ್ಲಿ ನಿರಂತರವಾಗಿ ಜನಪರ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ಮಕ್ಕಳಿಗೋಸ್ಕರ ಇನ್ಸ್ಟ್ರಾಕ್ಟ್ ಸಂಸ್ಥೆಯನ್ನು ಪ್ರಾರಂಭಿಸಿದ್ದು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ ರೋಟರಿ ಶಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಅನುವು ಮಾಡಿಕೊಟ್ಟಿದ್ದೇವೆ….

Read More

ಶಿಕ್ಷಕರಿಗೆ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ.

ವಿಜಯ ದರ್ಪಣ ನ್ಯೂಸ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 17 ಉದ್ಯಮಶೀಲತಾ ಪರಿಕಲ್ಪನೆಯನ್ನು ಕಾಲೇಜುಗಳಲ್ಲಿ ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯಮಿಗಳಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಹೀಗಾಗಿ ಶಿಕ್ಷಕರಿಗೆ ಮೊದಲು ತರಬೇತಿ ನೀಡುವ ಮೂಲಕ ಕಾಲೇಜುಗಳಲ್ಲಿ ಉದ್ಯಮಶೀಲತಾ ಕಾರ್ಯಕ್ರಮ ಗಳನ್ನು ಬಲಪಡಿಸುವ ಗುರಿಯನ್ನು ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ(ಯು.ಎನ್.ಡಿ.ಪಿ)ಹೊಂದಿದೆ ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಅಭಿಪ್ರಾಯ ಪಟ್ಟರು. ದೊಡ್ಡಬಳ್ಳಾಪುರ ನಗರದ ಸಾಮರ್ಥ್ಯ ಸೌಧದಲ್ಲಿ ವಿಶ್ವ ಸಂಸ್ಥೆಯ ಅಭಿವೃಧ್ಧಿ ಕಾರ್ಯಕ್ರಮ,…

Read More