ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನತಾ ದರ್ಶನ ಸಹಕಾರಿ: ಸಚಿವ ಕೆ.ಹೆಚ್ ಮುನಿಯಪ್ಪ

 ವಿಜಯ ದರ್ಪಣ ನ್ಯೂಸ್ , ಹೊಸಕೋಟೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ :ಸೆಪ್ಟೆಂಬರ್ 25  ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವುದರಿಂದ ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹೊಸಕೋಟೆ ತಾಲ್ಲೂಕಿನ “ಸೈಯದ್ ಪ್ಯಾಲೆಸ್” (ರಾಷ್ಟ್ರೀಯ ಹೆದ್ದಾರಿ 75 ಎಂ.ವಿ.ಜೆ…

Read More

ಡೆಂಗಿ ಜ್ವರ, ಚಿಕನ್ ಗುನ್ಯ ಬಗ್ಗೆ ಭಯಬೇಡ: ಡಾ.ಸುನೀಲ್ ಕುಮಾರ್

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 22 :- ಸೋಂಕಿತ ಈಡೀಸ್ ಸೊಳ್ಳೆಯು ಕಚ್ಚುವುದರಿಂದ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರವಾದ ಹೊಟ್ಟೆನೋವು, ಮೈ-ಕೈ-ನೋವು, ವಾಕರಿಕೆ, ವಾಂತಿ ಇವುಗಳ ಜೊತೆ ತೀವ್ರವಾದ ಹೊಟ್ಟೆನೋವು, ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು, ಚರ್ಮದ ಮೇಲೆ ಗಂಧೆಗಳು, ವಿಪರೀತ ಬಾಯಾರಿಕೆ, ಜ್ಞಾನ ತಪ್ಪುವುದು ಇನ್ನಿತರ ಲಕ್ಷಣಗಳು ಕಂಡು ಬಂದಲ್ಲಿ ಅಥವಾ ಯಾವುದೇ ಜ್ವರ ಲಕ್ಷಣಗಳು ಕಂಡು ಬಂದಲ್ಲಿ…

Read More

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್ 

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 22 : 2023ರ ಅಕ್ಟೋಬರ್ 2 ರಂದು 154ನೇ ಮಹಾತ್ಮ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “154ನೇ ಮಹಾತ್ಮ ಗಾಂಧಿ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ. 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 19: ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ…

Read More

ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್. ಎಸ್ ಭೋಸರಾಜು ಸೂಚನೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ 20  : ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು…

Read More

ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 20 : ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ನಡುವೆ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಅಂಬೇಡ್ಕರ್…

Read More

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಂಸದ ಬಿ.ಎನ್.ಬಚ್ಚೇಗೌಡ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17, ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು….

Read More

ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ವಿಜಯ ದರ್ಪಣ ನ್ಯೂಸ್. ಬಿಜಿಎಸ್ ನಗರ, ದೇವನಹಳ್ಳಿತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 16 . ಆರೋಗ್ಯ ಸೇವೆಗಳನ್ನು ಜನಮುಖಿಗೊಳಿಸುವ ನಿಟ್ಟಿನಲ್ಲಿ ಘನ ಭಾರತ ಸರ್ಕಾರವು ಸಾರ್ವತ್ರಿಕ ಜನ ಆರೋಗ್ಯ ಸೇವೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಾಗೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿದ್ದು, ಅಭಿಯಾನವನ್ನು ದೇಶದ ಘನ ವೆತ್ತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ರವರು ಸೆಪ್ಟೆಂಬರ್ 13ರಂದು ಚಾಲನೆ ನೀಡಿರುತ್ತಾರೆ.‌ ಅದೇ ರೀತಿ…

Read More

ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿಗ ಆಚರಣೆ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17 , ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಒಳಾಂಗಣದಲ್ಲಿ “ಶ್ರೀ ವಿಶ್ವಕರ್ಮ ಜಯಂತಿ”ಯನ್ನು ಆಚರಿಸಲಾಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ…

Read More

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 13,: ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಆಚರಿಸಲಾಗುತ್ತಿದೆ. ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದೆ. ಜಯಂತಿಯ ಪ್ರಯುಕ್ತ ರಾಜ್ಯಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ…

Read More