ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ನೋಂದಾಯಿಸಿ ಕೊಳ್ಳಲು ಜಿಲ್ಲಾಧಿಕಾರಿ ಕರೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ ಜಿಲ್ಲೆ, ಜುಲೈ 24  2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…

Read More

ಸಕಾರಾತ್ಮಕ ಮನೋಭಾವ ಸ್ವ ಉದ್ಯೋಗಕ್ಕೆ ಅಡಿಪಾಯ: ಸಾಧನಾ ಫೋಟೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ,          ಬೆಂಗಳೂರು ಗ್ರಾ ಜಿಲ್ಲೆ. ಜುಲೈ 19 ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗೆ ಅನುಸಾರವಾಗಿ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವರಿಗೆ, ಸ್ವ ಉದ್ಯೋಗಕ್ಕೆ, ಸಕಾರಾತ್ಮಕ ಧೋರಣೆಯೇ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿ ಶ್ರೀಮತಿ ಸಾಧನಾ ಪೋಟೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್…

Read More

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ

ವಿಜಯ ದರ್ಪಣ ನ್ಯೂ ಸ್,  ಹೊಸಕೋಟೆ        ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ…

Read More

ಹಾಲು ಉತ್ಪಾದಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ: ಬಮೂಲ್ ಪ್ರಭಾರ ಅಧ್ಯಕ್ಷ ಕೆಎಂ ಮಂಜುನಾಥ್.

ವಿಜಯ ದರ್ಪಣ ನ್ಯೂಸ್,  ಜುಲೈ 14 ದೇವನಹಳ್ಳಿ ,  ಬೆಂಗಳೂರು ಗ್ರಾ ಜಿಲ್ಲೆ ಗ್ರಾಮೀಣ  ಭಾಗದಲ್ಲಿರುವ ರೈತರ ಜೀವನ ಆಧಾರ ಹೈನುಗಾರಿಕೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5/- ರೂ ಏರಿಕೆ ಮಾಡುವ ಭರವಸೆ ನೀಡಿದ್ದರು ಆದಷ್ಟು ಬೇಗ ಈಡೇರಿದರೆ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಬಮೂಲ್ ಪ್ರಭಾರ ಅದ್ಯಕ್ಷ ಕೆ ಎಂ ಮಂಜುನಾಥ್ ( KMM) ಅಭಿಪ್ರಾಯಪಟ್ಟರು.  ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಮೊದಲನೇ…

Read More

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ, ಜುಲೈ 14 ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ….

Read More

ಮಹಿಳೆಯರ ಸಶಕ್ತಿಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ             ಬೆಂಗಳೂರು ಗ್ರಾ ಜಿಲ್ಲೆ  . ಜುಲೈ 11 ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ…

Read More

ಡಾ. ಬಾಬು ಜಗಜೀವನರಾಂ ಅವರು ಯಾವುದೇ ವರ್ಗಕ್ಕೆ ಸೀಮಿತವಾಗಿಲ್ಲ : ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ                        ಬೆಂಗಳೂರು ಗ್ರಾ ಜಿಲ್ಲೆ  ಜುಲೈ 06 ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು…

Read More

ಮಾಕಳಿ ಬೆಟ್ಟದಲ್ಲಿ  ಜಿಲ್ಲಾಧಿಕಾರಿ ಅವರಿಂದ ಗಿಡ ನೆಡುವ ಮೂಲಕ ವನಮಹೋತ್ಸವ.

ವಿಜಯ ದರ್ಪಣ ನ್ಯೂಸ್, ದೊಡ್ಡಬಳ್ಳಾಪುರ  ಬೆಂಗಳೂರು ಗ್ರಾ ಜಿಲ್ಲೆ, ಜುಲೈ 03 ಅರಣ್ಯ ಇಲಾಖೆಯ ವನಮಹೋತ್ಸವ ಸಪ್ತಾಹದ (ಜುಲೈ 01 ರಿಂದ 07) ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ಹಲಸು ಗಿಡ, ಆಲದ ಗಿಡ, ಅರಳಿ ಗಿಡ ಇನ್ನಿತರ ಜಾತಿಗಳ ಗಿಡಗಳನ್ನು ನೆಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ…

Read More

ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ : ಅಣುಕು ಪ್ರದರ್ಶನ

  ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ  ಜಿಲ್ಲೆ .ಜುಲೈ  01 ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು,…

Read More

ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳೇ ನಮ್ಮೆಲ್ಲರಿಗೂ ಮಾರ್ಗದರ್ಶಕ: ಸಚಿವ ಕೆ ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ. ಜಿಲ್ಲೆ,  ಜೂನ್ 27 ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. “ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ,…

Read More