ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ, ಜುಲೈ 14 ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ….

Read More

ಮಹಿಳೆಯರ ಸಶಕ್ತಿಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ             ಬೆಂಗಳೂರು ಗ್ರಾ ಜಿಲ್ಲೆ  . ಜುಲೈ 11 ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ…

Read More

ಡಾ. ಬಾಬು ಜಗಜೀವನರಾಂ ಅವರು ಯಾವುದೇ ವರ್ಗಕ್ಕೆ ಸೀಮಿತವಾಗಿಲ್ಲ : ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ                        ಬೆಂಗಳೂರು ಗ್ರಾ ಜಿಲ್ಲೆ  ಜುಲೈ 06 ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು…

Read More

ಮಾಕಳಿ ಬೆಟ್ಟದಲ್ಲಿ  ಜಿಲ್ಲಾಧಿಕಾರಿ ಅವರಿಂದ ಗಿಡ ನೆಡುವ ಮೂಲಕ ವನಮಹೋತ್ಸವ.

ವಿಜಯ ದರ್ಪಣ ನ್ಯೂಸ್, ದೊಡ್ಡಬಳ್ಳಾಪುರ  ಬೆಂಗಳೂರು ಗ್ರಾ ಜಿಲ್ಲೆ, ಜುಲೈ 03 ಅರಣ್ಯ ಇಲಾಖೆಯ ವನಮಹೋತ್ಸವ ಸಪ್ತಾಹದ (ಜುಲೈ 01 ರಿಂದ 07) ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ಹಲಸು ಗಿಡ, ಆಲದ ಗಿಡ, ಅರಳಿ ಗಿಡ ಇನ್ನಿತರ ಜಾತಿಗಳ ಗಿಡಗಳನ್ನು ನೆಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ…

Read More

ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ : ಅಣುಕು ಪ್ರದರ್ಶನ

  ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ  ಜಿಲ್ಲೆ .ಜುಲೈ  01 ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು,…

Read More

ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳೇ ನಮ್ಮೆಲ್ಲರಿಗೂ ಮಾರ್ಗದರ್ಶಕ: ಸಚಿವ ಕೆ ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ. ಜಿಲ್ಲೆ,  ಜೂನ್ 27 ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. “ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ,…

Read More

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಸಕಲ ಸಿದ್ಧತೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ         ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 23  ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಜೂನ್ 27 ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೇವನಹಳ್ಳಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೆಂಪೇಗೌಡ ಜಯಂತಿ ಆಚರಣೆಯ…

Read More

ಅರಿವು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ.        ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 23 ಕರ್ಅನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ  ನಿಗಮ ನಿಯಮಿತ(ನಿ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದೇಶಿ (OVERSEAS) ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ (OVERSEAS) ಸಾಲ ಯೋಜನೆಯಡಿಯಲ್ಲಿ ವಿದೇಶದಲ್ಲಿ…

Read More

2024ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಹೆಸರುಗಳನ್ನು ಶಿಫಾರಸು ಮಾಡಲು ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 22  ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2024ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠತೆಗಳಿಸಿ ಅಸಾಧರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಲೆ(ಜನಪ್ರಿಯ ಕಲೆ, ಸಂಗೀತ,ಚಿತ್ರಕಲೆ,ವಾಸ್ತು ಶಿಲ್ಪ,ಶಿಲ್ಪಕಲೆ ಚಲನಚಿತ್ರ ಛಾಯಾಗ್ರಹಣ ಮತ್ತಿತರ), ಸಮಾಜ ಕಾರ್ಯ (ಸಮಾಜ ಸೇವೆ ಧರ್ಮಾರ್ಥ ಸೇವೆ, ಸಮುದಾಯ…

Read More

ಹಾಸ್ಟೆಲ್ ಗಳಲ್ಲಿ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಎಸ್.ಎಚ್.ಪಿ ಪೊರ್ಟಲ್ ಮೂಲಕ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 21  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಉಚಿತ ಪ್ರವೇಶಕ್ಕಾಗಿ  ಆನ್‌ಲೈನ್ ಎಸ್.ಎಚ್.ಪಿ ಪೋಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ( ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ…

Read More