ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ
ವಿಜಯ ದರ್ಪಣ ನ್ಯೂಸ್… ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ ಮಡಿಕೇರಿ ಮಾ.21:- ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯದ ತ್ರೀವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ತ್ರಿವೇಣಿ ಸಂಗಮದಲ್ಲಿ ತೀರ್ಥ ಪ್ರಸಾದ ಪಡೆದರು. ಬಳಿಕ ಮಹಾಗಣಪತಿ, ಭಗಂಡೇಶ್ವರ,…