ವಿಜೃಂಭಣೆಯಿಂದ ನಡೆದ ಮುತ್ಯಾಲಮ್ಮ ದೇವಿ ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣ  ಇಲ್ಲಿನ ಶಾಂತಿ ನಗರದಲ್ಲಿನ ಮುತ್ಯಾಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಮತ್ತು ಹೂವಿನ ಆರತಿಗಳು ವಿಜೃಂಭಣೆಯಿಂದ ನಡೆದವು. ದೇವಾಲಯವನ್ನು ವಿದ್ಯುತ್ ದೀಪಲಾಂಕಾರ ಹಾಗೂ ವಿಶೇಷ ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು ಮುತ್ಯಾಲಮ್ಮ ದೇವಿ ಮೂಲ ದೇವರಿಗೆ ಮಾಡಲಾಗಿದ್ದ ವಿಶೇಷ ಪಂಜುರ್ಲಿ ಅಲಂಕಾರ ಎಲ್ಲರ ಆಕರ್ಷಣೆಯಾಗಿತ್ತು. ಬೆಳಗ್ಗೆ 11 ಗಂಟೆಗೆ ದೇವಾಲಯದ ಬಳಿಯಿಂದ ಹೊರಟ ಮುತ್ಯಾಲಮ್ಮ ದೇವಿ ಹಾಗೂ ದೊಡ್ಡಮ್ಮ ದೇವಿಯ ರಥೋತ್ಸವದಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು….

Read More

ಅಕಾಲಿಕ ಮಳೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪಾರ ಬೆಳೆ ನಷ್ಟ.

ವಿಜಯ ದರ್ಪಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 23  ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2023ರ ಮೇ 20 ರಿಂದ ಮೇ 23 ರವರೆಗೆ ಸುರಿದ ಅಕಾಲಿಕ ಮಳೆ, ಗಾಳಿಯಿಂದ 30.03 ಹೆಕ್ಟೇರ್ ವಿಸ್ತೀರ್ಣದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ. ಮುಂಗಾರು ಮಳೆ ಆರಂಭವಾಗುವ ಹಿನ್ನೆಲೆಯಲ್ಲಿ ಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್ ಲತಾ ಅವರು ಅಧಿಕಾರಿಗಳಿಗೆ ತಿಳಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿ…

Read More

ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಿದ್ದರಾಗಿ.

ವಿಜಯ ದರ್ಪಣ ನ್ಯೂಸ್, ಮೇ.23  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ / ಸೂಚನೆಗಳನ್ನು ನೀಡಿರುತ್ತದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದ್ದಾರೆ. ಗುಡುಗು…

Read More

ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ರದ್ದುಗೊಳಿಸಿ: ಸಿ.ಮುನಿಯಪ್ಪ ಅಗ್ರಹ

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ  ಕನ್ನಡ ಭಾಷೆಗೆ ಅವಮಾನ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ರದ್ದುಗೊಳಿಸಬೇಕೆಂದು ಭಾರತ ಜನ ಜಾಗೃತಿ ಸೇನೆ ರಾಜ್ಯಧ್ಯಕ್ಷ ಸಿ ಮುನಿಯಪ್ಪ ಆಗ್ರಹ ಮಾಡಿದರು . ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತ  ಕನ್ನಡ ನಾಡಿನಲ್ಲಿರುವ ಏಳುಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದು, ಕರ್ನಾಟಕದಲ್ಲಿ ಹುಟ್ಟಿ ಬೆಳೆದು ಕನ್ನಡ ನೆಲ ಜಲ ಅನುಭವಿಸಿ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿ ಬೆಂಗಳೂರಿನ ಕನ್ನಡಿಗರ ಮತದಿಂದ ವಿಧಾನಸಭೆಗೆ ಆಯ್ಕೆಯಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರು…

Read More

ಹಳ್ಳಿಗಟ್ಟು ಗ್ರಾಮದ ವಾರ್ಷಿಕ ಬೋಡು ನಮ್ಮೆ… ಕೆಸರು ಎರಚಾಟ ಇಲ್ಲಿನ ಆಕರ್ಷಣೆ….. .

ಕೊಡಗು ಜಿಲ್ಲೆ  ಸಾವಿರಾರು ವರ್ಷಗಳಿಗೂ ಹಿಂದಿನ ಇತಿಹಾಸವಿರುವ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಗುಂಡ್ಯತ್ ದೇವರ ವಾರ್ಷಿಕ ಬೋಡ್ ನಮ್ಮೆ ದೇವರ ಉತ್ಸವ ಶನಿವಾರ ಭಾನುವಾರ ಶ್ರದ್ಧ ಭಕ್ತಿಯಲ್ಲಿ ಜರುಗಿತು. ದೇವಾಲಯದ ಮುಂಭಾಗದ ಗದ್ದೆಯಲ್ಲಿ ವೇಷ ಧರಿಸಿದವರು ಪರಸ್ಪರ ಕೆಸರು ಎರಚಾಟ ಮಾಡಿಕೊಂಡು ವಾಲಗದೊಂದಿಗೆ ನೃತ್ಯ ಮಾಡಿ ನಂತರ ದೇವಾಲಯಕ್ಕೆ ಸಾಂಪ್ರದಾಯಿಕ ದೇವರ ಹಾಡುಗಳನ್ನು ಹಾಡುತ್ತಾ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಭಕ್ತಿ ಭಾವದಿಂದ ಶ್ರೀ ಭದ್ರಕಾಳಿ ದೇವರಿಗೆ ಪೂಜಿ ಸಲ್ಲಿಸಿದ ನಂತರ…

Read More

ತುಮಕೂರು ಸಹಕಾರಿ ಹಾಲು ಒಕ್ಕೂಟದಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಆದೇಶ:

‏ ತುಮಕೂರು ಸಹಕಾರಿ ಹಾಲು ಒಕ್ಕೂಟದಲ್ಲಿ (ತುಮುಲ್) ನಡೆದಿರುವ ಘಟನೆ ವಿಚಾರಣೆ ನಡೆಸಿ ವರದಿ ನೀಡಲು ಆದೇಶಿಸಲಾಗಿದ್ದು , ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತುಮಕೂರು ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ. ಒಕ್ಕೂಟದ ಅಧಿಕಾರಿಗಳು ಪರೀ ವೀಕ್ಷಣೆ ಸಂದರ್ಭದಲ್ಲಿ ಟ್ಯಾಂಕರ್ ಗಳ ಚಾಲಕರು ಅವ್ಯವಹಾರದಲ್ಲಿ ತೊಡಗಿರುವುದನ್ನು ನೇರವಾಗಿ ಪತ್ತೆ ಮಾಡಿದ್ದಾರೆ. ಮೇ 17ರಂದು ಘಟನೆ ನಡೆದ ದಿನವೇ ಅಧಿಕಾರಿಗಳಿಂದ ವಿವರ ಪಡೆದು, ಮೇ 18ರಂದು ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸು ಜಾರಿ ಮಾಡಲಾಗಿದೆ ಎಂದು…

Read More

ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇ ಖಾತೆ ಮಾಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ: ಕೆ ಆರ್ ಎಸ್ ಪಕ್ಷದ ಶಿವಶಂಕರ್ ಆರೋಪ.

ವಿಜಯ ದರ್ಪಣ ನ್ಯೂಸ್ ಮೇ.18 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇ ಖಾತೆ ಮಾಡಿಸಲು 15 ರಿಂದ 20000 ಲಂಚ ನೀಡಬೇಕೆಂದು ಅಧಿಕಾರಿಗಳು ಬೇಡಿಕೆ ಇಡುತ್ತಿದ್ದಾರೆಂದು ಕೆ ಅರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್  ಅರೋಪ ಮಾಡಿದ್ದಾರೆ. ನಗರದ ಕೆ ಅರ್ ಎಸ್ ಪಕ್ಷದ ಕಛೇರಿಯಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇ ಖಾತೆ‌ಮಾಡಿಸಲು ಖಾತೆದಾರರಿಗೆ 15ರಿಂದ 20000 ಲಂಚ ನೀಡಬೇಕೆಂದು ಬೇಡಿಕೆ ಇಡುತ್ತಾರೆ. ಈ ಕುರಿತು ನಾವುಗಳು ಸಂಭದಪಟ್ಟ ಅಧಿಕಾರಿಗಳಿಗೆ ಕೇಳಿದರೆ…

Read More

ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್.ಮೇ 18 ಬೆಂಗಳೂರು ಗ್ರಾಮಾಂತರ ಜಿಲ್ಲೆ ಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ರುವ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ…

Read More

ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್…ಮೇ 17 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ…

Read More

ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್‌ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯಸ್ಸಿನವರಾಗಿದ್ದು , ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ…

Read More