ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ನಿಸರ್ಗ ನಾರಾಯಣಸ್ವಾಮಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ 8 ವರ್ಷದಿಂದ  ಪ್ರಾಮಾಣಿಕವಾಗಿ ಜನಸೇವೆ ಮಾಡುವ ಮೂಲಕ ಜನರ ಪ್ರೀತಿ, ವಿಶ್ವಾಸಗಳಿಸಿದರ ಪರಿಣಾಮ 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ  ನನ್ನನ್ನು ಶಾಸಕರನ್ನಾಗಿ  ಆಯ್ಕೆ ಮಾಡಿದ್ದೀರಿ. ಐದು ವರ್ಷಗಳ ಕಾಲ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ  ಅಭಿವೃದ್ದಿಗೆ ಶಾಸಕನಾಗಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿರುತ್ತೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ  ನನಗೆ ಮತದಾರರು ಕೊಟ್ಟ ತೀರ್ಪಿಗೆ ತಲೆಬಾಗಿ ಗೌರವಿಸುತ್ತೇನೆ. ನನಗೆ 68,427 ಮತ ನೀಡಿ ಬೆಂಬಲಿಸಿದ ದೇವನಹಳ್ಳಿ…

Read More

ಲಿಂಗಾಯತರಿಗೆ ಸಿ ಎಂ ಸ್ಥಾನ ನೀಡಬೇಕು: ಬಸವರಾಜ ಧನ್ನೂರ

ಬೀದರ್,ಮೇ.15:- 2023ರ ವಿಧಾನ ಸಭೆ ಸಾರ್ವತ್ರೀಕ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪ್ರಚಂಡ ಬಹುಮತದಿಂದ ಗೆದ್ದು 224 ಸ್ಥಾನಗಳಲ್ಲಿ 135 ಸ್ಥಾನಗಳು ಗಳಿಸಿ ನಿಚ್ಚಳ ಬಹುಮತ ಪಡೆದಿದೆ. ಲಿಂಗಾಯತ ಸಮುದಾಯ ಕಾಂಗ್ರೇಸ್ ಅಭ್ಯರ್ಥಿಗಳಿಗೆ ಬೆಂಬಲಿಸಿ ಗೆಲ್ಲಿಸಿರುವುದರಿಂದ ಮುಖ್ಯಮಂತ್ರಿ ಸ್ಥಾನವನ್ನು ಲಿಂಗಾಯತ ಸಮುದಾಯದ ವ್ಯಕ್ತಿಗಳಿಗೆ ನೀಡಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಷ್ಟ್ರೀಯ ಬಸವದಳದ ಅಧ್ಯಕ್ಷ ಬಸವರಾಜ ಧನ್ನೂರ ಅವರು  ಬೀದರ ನಗರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಹೈಕಮಾಂಡಿಗೆ ಒತ್ತಾಯಿಸಿದರು. ಈ ಸಲದ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ…

Read More

ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ..!

ಬೆಂಗಳೂರು ಗ್ರಾಮಾಂತರ ಮೇ15. ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಯನಗುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ತಡರಾತ್ರಿ ಅಂಬೇಡ್ಕರ್ ಪ್ರತಿಮೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ .ಕೂಡಲೇ ಪ್ರತಿಮೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಅಗ್ರಹಿಸಿದ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 207 ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಶಾಲಾ…

Read More

ಬಿಜೆಪಿಯ ಕೆಲವು ಗದ್ಧಾರರಿಂದಲೇ ನನಗೆ ಸೋಲುಂಟಾಗಿದೆ: ಈಶ್ವರ್ ಸಿಂಗ್ ಠಾಕೂರ್

ಬೀದರ್, ಮೆ 14: ಬಿಜೆಪಿಯ ಕೆಲವು ಗದ್ದಾರರಿಂದಲೇ ತಮಗೆ ಸೋಲುಂಟಾಗಿದೆ ಎಂದು ಬಿಜೆಪಿ ಪಕ್ಷದ ಬೀದರ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಅವರು ಆರೋಪಿಸಿದರು. ಅವರು ಇಂದು  ಬೆಳಿಗ್ಗೆ ಬೀದರ ನಗರದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು. ತಮ್ಮ ವಿಶ್ವಾಸಕ್ಕೆ ಮತ್ತು ಪಕ್ಷಕ್ಕೆ ದ್ರೋಹ ಬಗೆದು ಮೋಸ ಮಾಡಿರುವ ಬಿಜೆಪಿಯ ಡಿಕೆ ಸಿದ್ರಾಮ್ ಹಾಗೂ ಇತರರು ತಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆ. ಮತ್ತು ಅನೇಕ ವಾಮ ಮಾರ್ಗಗಳನ್ನು ಅನುಸರಿಸಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ…

Read More

ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಡಿಸಿಪಿ ಲಕ್ಷ್ಮಿ ಪ್ರಸಾದ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರನ್ವಯ ಮೇ 10 ರಿಂದ ಮೇ 14 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷೀ ಪ್ರಸಾದ್ ತಿಳಿಸಿದ್ದಾರೆ. ಮೆರವಣಿಗೆ ಮಾಡುವುದನ್ನು, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ, ಭಾರತೀಯ ದಂಡ ಸಂಹಿತೆ ಕಲಂ 144 ರನ್ವಯ…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ ಚಲಾಯಿಸಿದವರ ವಿವರ

ಮೇ.10 ರಂದು ನಡೆದ ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ-2023 ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರು: 877890* *ಪುರುಷ : 435835* *ಮಹಿಳೆ : 441907* *ಇತರೆ : 148* *ಮತದಾನ ಮಾಡಿದವರು* *ಪುರುಷ :374588* *ಮಹಿಳೆ : 372230* *ಇತರೆ : 55* *ಒಟ್ಟು ಮತದಾನ ಮಾಡಿದವರು: 746873* *ಮತದಾನ ಶೇ: 85.08%* *178-ಹೊಸಕೋಟೆ ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರು: 234079* *ಪುರುಷ : 116252* *ಮಹಿಳೆ : 117805*…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85% ಮತದಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 85% ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್ ಲತಾ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರಹೊಸಕೋಟೆ ವಿಧಾನಸಭಾ ಕ್ಷೇತ್ರ: 90.86%, ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 84.61%, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 84.30%, …

Read More

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ವಶಪಡಿಸಿಕೊಂಡ ಮೌಲ್ಯ ರೂ.4,66,28,349/-.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ವಿವಿಧ ತಂಡಗಳಿಂದ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ  ಇದುವರೆಗೂ ವಶಪಡಿಸಿಕೊಂಡ ವಸ್ತುಗಳ ಒಟ್ಟಾರೆ ಮೌಲ್ಯ 4,66,28,349 ರೂ.ಗಳು. ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ ದಿನಾಂಕ: 29.03.2023 ರಿಂದ ದಿನಾಂಕ: 09.05.2023 ರವರೆಗೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ವಿಧಾನಸಭಾ ಕ್ಷೇತ್ರಗಳಲ್ಲಿ ವಶಪಡಿಸಿಕೊಂಡಿರುವ ನಗದು, ಇತರೆ ವಸ್ತುಗಳ ವಿವರ ನಗದು: ಮೌಲ್ಯ ರೂ. 87,53,060, ಮದ್ಯ: ಮೌಲ್ಯ ರೂ. 2,82,40,047 (97124.760 ಲೀ.), ಮಾದಕ ವಸ್ತು: ಮೌಲ್ಯ ರೂ. 19,68,700 (30.899 ಕೆ.ಜಿ.) ,ಇತರೆ…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ.

ಬೆಂಗಳೂರು ಗ್ರಾಮಾಂತರ ಜಿಲ್ಲೆ,. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 13630 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 13 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾಗಿದ್ದ 13617 ವಿದ್ಯಾರ್ಥಿಗಳಲ್ಲಿ 13138 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 466 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.ನೆಲಮಂಗಲ ತಾಲ್ಲೂಕಿನ ಸೆಂಚುರಿ ಪ್ರೌಢಶಾಲೆಯ ವಿದ್ಯಾರ್ಥಿ ನಿಶಾಂತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ…

Read More

ವಿಧಾನಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ 2023ರ ಮೇ 10 ರಂದು ಮತದಾನವು ನಡೆಯಲಿರುವ ಹಿನ್ನೆಲೆ, ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 10 ರಂದು ಮತದಾನ ಮತದಾನ ಮುಕ್ತಾಯವಾಗುವವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ಷರತ್ತಿಗೊಳಪಡಿಸಿ, ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ….

Read More