ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ
ವಿಜಯ ದರ್ಪಣ ನ್ಯೂಸ್…. ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೊಭವ, ಪಿತೃದೇವೋಭವ,ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಕೌಟುಂಬಿಕ ಮೌಲ್ಯಗಳು ವ್ಯಕ್ತಿಯ ಆದರ್ಶಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ. ಮಮತೆ, ಭ್ರಾತೃತ್ವ , ತ್ಯಾಗ, ದೇಶಪ್ರೇಮ, ಪಿತೃವಾಕ್ಯ ಪರಿಪಾಲನೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಿರುವ ಮಹಾಕಾವ್ಯ ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿಯನ್ನು ಸ್ಮರಿಸುವ ಸುದಿನ ಈ ದಿನ. ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯಾಗಿದ್ದಾರೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ಹಲವಾರು…