ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ದರೋಡೆ : ಆಭರಣ ಲೂಟಿ.
ವಿಜಯ ದರ್ಪಣ ನ್ಯೂಸ್ .. ಮದ್ದೂರು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲಿಸಿ ಹೋದ ಬೆನ್ನಲ್ಲೇ ಮಧ್ಯರಾತ್ರಿ ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿಯನ್ನು ಬೆದರಿಸಿ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಅರಪಟ್ಟು ಗ್ರಾಮದ ಇಂಟೀರಿಯರ್ ಡಿಸೈನರ್ ಮುತ್ತಪ್ಪ ಕೆ.ಕೆ ರವರನ್ನು ಮೂವರು ದುಷ್ಕರ್ಮಿಗಳು ಡ್ರ್ಯಾಗನ್ ತೋರಿಸಿ ಬೆದರಿಸಿ ಅವರ ಬಳಿಯಿದ್ದ…