ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಿದ್ದರಾಗಿ.

ವಿಜಯ ದರ್ಪಣ ನ್ಯೂಸ್, ಮೇ.23  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ / ಸೂಚನೆಗಳನ್ನು ನೀಡಿರುತ್ತದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದ್ದಾರೆ. ಗುಡುಗು…

Read More

ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್ ಲತಾ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 23 ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಅತಿಯಾದ ಬಿಸಿ ಗಾಳಿ ಮತ್ತು ಬಿಸಿಲು ಇರುವುದರಿಂದ ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ  .ಮೇ 22: ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಮತ್ತು ಏನು…

Read More

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ ನೇಮಕ

  ಬೆಂಗಳೂರು ಮೇ 22 ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Read More

ಶಾಸಕ ಶರತ್ ಬಚ್ಚೇಗೌಡರಿಗೆ ಸಚಿವ ಸ್ಥಾನನೀಡಿ :ಸಿ ಮುನಿಯಪ್ಪ

″ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ರಾಜ್ಯದ ಪ್ರಭಾವಿ ಒಕ್ಕಲಿಗರ ಯುವ ನಾಯಕರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲಾ ಜನಾಂಗಗಳ ಜನರ ಒಡನಾಡಿ  ಉತ್ತಮ ವಾಗ್ಮೀಗಳು ಆದ ಶರತ್ ಬಚ್ಚೇಗೌಡ ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು ಸಚಿವ ಸ್ಥಾನ ನೀಡಬೇಕೆಂದು ಭಾರತ ಜನ ಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ ಮುನಿಯಪ್ಪ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು ಹೊಸಕೋಟೆ ತಾಲೂಕಿನಲ್ಲಿ ಜಾತಿ ಭೇದವಿಲ್ಲದೆ…

Read More

ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ರದ್ದುಗೊಳಿಸಿ: ಸಿ.ಮುನಿಯಪ್ಪ ಅಗ್ರಹ

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ  ಕನ್ನಡ ಭಾಷೆಗೆ ಅವಮಾನ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ರದ್ದುಗೊಳಿಸಬೇಕೆಂದು ಭಾರತ ಜನ ಜಾಗೃತಿ ಸೇನೆ ರಾಜ್ಯಧ್ಯಕ್ಷ ಸಿ ಮುನಿಯಪ್ಪ ಆಗ್ರಹ ಮಾಡಿದರು . ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತ  ಕನ್ನಡ ನಾಡಿನಲ್ಲಿರುವ ಏಳುಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದು, ಕರ್ನಾಟಕದಲ್ಲಿ ಹುಟ್ಟಿ ಬೆಳೆದು ಕನ್ನಡ ನೆಲ ಜಲ ಅನುಭವಿಸಿ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿ ಬೆಂಗಳೂರಿನ ಕನ್ನಡಿಗರ ಮತದಿಂದ ವಿಧಾನಸಭೆಗೆ ಆಯ್ಕೆಯಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರು…

Read More

ಹಳ್ಳಿಗಟ್ಟು ಗ್ರಾಮದ ವಾರ್ಷಿಕ ಬೋಡು ನಮ್ಮೆ… ಕೆಸರು ಎರಚಾಟ ಇಲ್ಲಿನ ಆಕರ್ಷಣೆ….. .

ಕೊಡಗು ಜಿಲ್ಲೆ  ಸಾವಿರಾರು ವರ್ಷಗಳಿಗೂ ಹಿಂದಿನ ಇತಿಹಾಸವಿರುವ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಗುಂಡ್ಯತ್ ದೇವರ ವಾರ್ಷಿಕ ಬೋಡ್ ನಮ್ಮೆ ದೇವರ ಉತ್ಸವ ಶನಿವಾರ ಭಾನುವಾರ ಶ್ರದ್ಧ ಭಕ್ತಿಯಲ್ಲಿ ಜರುಗಿತು. ದೇವಾಲಯದ ಮುಂಭಾಗದ ಗದ್ದೆಯಲ್ಲಿ ವೇಷ ಧರಿಸಿದವರು ಪರಸ್ಪರ ಕೆಸರು ಎರಚಾಟ ಮಾಡಿಕೊಂಡು ವಾಲಗದೊಂದಿಗೆ ನೃತ್ಯ ಮಾಡಿ ನಂತರ ದೇವಾಲಯಕ್ಕೆ ಸಾಂಪ್ರದಾಯಿಕ ದೇವರ ಹಾಡುಗಳನ್ನು ಹಾಡುತ್ತಾ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಭಕ್ತಿ ಭಾವದಿಂದ ಶ್ರೀ ಭದ್ರಕಾಳಿ ದೇವರಿಗೆ ಪೂಜಿ ಸಲ್ಲಿಸಿದ ನಂತರ…

Read More

ತುಮಕೂರು ಸಹಕಾರಿ ಹಾಲು ಒಕ್ಕೂಟದಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಆದೇಶ:

‏ ತುಮಕೂರು ಸಹಕಾರಿ ಹಾಲು ಒಕ್ಕೂಟದಲ್ಲಿ (ತುಮುಲ್) ನಡೆದಿರುವ ಘಟನೆ ವಿಚಾರಣೆ ನಡೆಸಿ ವರದಿ ನೀಡಲು ಆದೇಶಿಸಲಾಗಿದ್ದು , ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತುಮಕೂರು ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ. ಒಕ್ಕೂಟದ ಅಧಿಕಾರಿಗಳು ಪರೀ ವೀಕ್ಷಣೆ ಸಂದರ್ಭದಲ್ಲಿ ಟ್ಯಾಂಕರ್ ಗಳ ಚಾಲಕರು ಅವ್ಯವಹಾರದಲ್ಲಿ ತೊಡಗಿರುವುದನ್ನು ನೇರವಾಗಿ ಪತ್ತೆ ಮಾಡಿದ್ದಾರೆ. ಮೇ 17ರಂದು ಘಟನೆ ನಡೆದ ದಿನವೇ ಅಧಿಕಾರಿಗಳಿಂದ ವಿವರ ಪಡೆದು, ಮೇ 18ರಂದು ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸು ಜಾರಿ ಮಾಡಲಾಗಿದೆ ಎಂದು…

Read More

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು: ಮೇ.20 ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಕರುನಾಡಿನ ಇಪ್ಪತ್ನಾಲ್ಕನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಜನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. “ಸಿದ್ದರಾಮಯ್ಯ ಎಂಬ ಹೆಸರಿನ ನಾನು.. ” ಸಿದ್ದರಾಮನಹುಂಡಿಯ  ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು…

Read More

ಅತಿಯಾಸೆ ಇದ್ದರೆ ಅವನು ಬಡವನೇ!

  ಲೇಖನ: ಜಯಶ್ರೀ. ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಸಣ್ಣವಳಿದ್ದಾಗ ನನ್ನಜ್ಜಿ ನನಗೆ ಹೇಳಿದ ಕತೆಗಳು ಅನೇಕ. ಅವುಗಳಲ್ಲಿ ಕೆಲವು ಇನ್ನೂ ಅವಳು ಹೇಳಿದ ಶೈಲಿಯಲ್ಲೇ ನೆನಪಿನಾಳದಲ್ಲಿ ಅಚ್ಚಳಿಯದಂತೆ ಉಳಿದಿವೆ. ಅದರಲ್ಲಿ ನನ್ನ ನೆಚ್ಚಿನ ಕತೆಯೆಂದರೆ, ಕುದುರೆ ಮತ್ತು ಗಜ್ಜರಿ. ಅದೊಂದು ಪುಟ್ಟದಾದ ಮಾರ್ಮಿಕ ಕತೆ. ತಾವೂ ಕೇಳಿ. ಕುದುರೆ ಪ್ರೇಮಿಯೊಬ್ಬ ಹಲವಾರು ಕುದುರೆಗಳನ್ನು ಸಾಕಿದ್ದ. ಅವುಗಳ ಮೇಲೆ ಸವಾರಿ ಮಾಡುವುದು ಅವನ ಷೋಕಿ ಆಗಿತ್ತು. ಊರಿನ ಜನರೆಲ್ಲ ಅವನನ್ನು ಕುದರೆವಾಲಾ ಎಂದೇ ಕರೆಯುತ್ತಿದ್ದರು.ಅವನಲ್ಲಿಗೆ ಬಂದ…

Read More