ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ…….
ವಿಜಯ ದರ್ಪಣ ನ್ಯೂಸ್…. ಜಾತ್ರೆ……. ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ ಸುಂಕದವನೊಬ್ಬ ಬೆಳಗ್ಗೆಯೇ ಚೀಲ ಹಿಡಿದು ನಿಂತಿದ್ದಾನೆ. ಎಷ್ಟೊಂದು ಲವಲವಿಕೆ ಅವನ ಮುಖದಲ್ಲಿ, ಬಂದಳು ನೋಡಿ ಸೊಪ್ಪಿನ ಅಜ್ಜಿ. ನೆಲದ ಮೇಲೆ ಗೋಣಿಚೀಲ ಹಾಸಿ ವಿವಿಧ ಸೊಪ್ಪಿನ ಕಟ್ಟುಗಳನ್ನು ಕಟ್ಟಿ ಅದರ ಮೇಲೆ ನೀರು ಚಿಮುಕಿಸಿ ಗಿರಾಕಿಗಳಿಗಾಗಿ ಕಾಯುತ್ತಾ ಕುಳಿತಿದ್ದಾಳೆ.. ಬಂದಾ ನೋಡಿ ತರಕಾರಿಯಾತ. ಟೊಮ್ಯಾಟೋ ಈರುಳ್ಳಿ ಆಲೂಗಡ್ಡೆ…