ವಿಜಯಪುರದಲ್ಲಿ ಜೆಡಿಎಸ್ ಬಹಿರಂಗ ಸಮಾವೇಶ. ಬಿಜೆಪಿ ಸರ್ಕಾರದಿಂದ ಶೂನ್ಯ ಅಭಿವೃದ್ಧಿ : ಸಿಎಂ ಇಬ್ರಾಹಿಂ ವಾಗ್ದಾಳಿ
ವಿಜಯಪುರ, (ದೇವನಹಳ್ಳಿ ತಾಲ್ಲೂಕು.) ಪಟ್ಟಣದ ಶಿವ ಗಣೇಶ ಸರ್ಕಲ್ ನಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿನ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರ ಬಗ್ಗೆ ಜೆಡಿಎಸ್ ಪಕ್ಷಕ್ಕೆ ಇರುವ ಕಾಳಜಿ ರಾಷ್ಟ್ರೀಯ ನಾಯಕರಿಗೆ ಇಲ್ಲ. ಜೆಡಿಎಸ್ ಸಂವಿಧಾನದ ಆಶಯಗಳಂತೆ ನಡೆಯುತ್ತಿರುವ…