ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಆರ್ ಲತಾ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 12 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ 13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು. 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು…