ಆಧುನಿಕತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಸಹಕಾರ ಚಳವಳಿಯನ್ನು ಬಲಪಡಿಸುತ್ತದೆ: ಅಮಿತ್ ಶಾ.
ವಿಜಯ ದರ್ಪಣ ನ್ಯೂಸ್ ಪುಣೆ ಆಗಸ್ಟ್ 06 ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ಕೇಂದ್ರೀಯ ಸಹಕಾರ ಸಂಘಗಳ ರಿಜಿಸ್ಟ್ರಾರ್ (ಸಿಆರ್‌ಸಿಎಸ್) ಕಚೇರಿಯ ಡಿಜಿಟಲ್ ಪೋರ್ಟಲ್ಅನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ, ‘ಆಧುನಿಕತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವಿಲ್ಲದೆ ಸಹಕಾರಿ ಚಳವಳಿಯನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದರು. ಸಹಕಾರ ಆಂದೋಲನದ ಸ್ವೀಕಾರವನ್ನು ಹೆಚ್ಚಿಸಲು, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸಬೇಕು. ಪಾರದರ್ಶಕ ವ್ಯವಸ್ಥೆಯಿಂದ ಮಾತ್ರ ದೇಶದ ಕೋಟ್ಯಂತರ ಜನರನ್ನು ಸಂಪರ್ಕಿಸಲು ಸಾಧ್ಯ. ‘ಬಹು-ರಾಜ್ಯ ಸಹಕಾರಿ ಸಂಘವನ್ನು…