ನಮ್ಮ ತೆರಿಗೆ ನಮ್ಮ ಹಕ್ಕು,
ವಿಜಯ ದರ್ಪಣ ನ್ಯೂಸ್… ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ….. ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ ಅಂಶಗಳನ್ನು ಗಮನಿಸಿದಾಗ ಒಂದಷ್ಟು ತಾರತಮ್ಯ ಮತ್ತು ಗೊಂದಲಗಳು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದು ಸಾಮಾನ್ಯರು ಮಾತನಾಡಬಹುದಾದ ವಿಷಯವಲ್ಲ. ಆರ್ಥಿಕ ಮತ್ತು ಒಕ್ಕೂಟ ವ್ಯವಸ್ಥೆಯ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲು ಒಂದಷ್ಟು ಅಧ್ಯಯನದ ಅವಶ್ಯಕತೆ ಇರುತ್ತದೆ. ಯಾವುದೋ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಪರ ವಿರೋಧ ವ್ಯಕ್ತಪಡಿಸುವುದು…