
ತೆರಿಗೆ ಲೂಟಿ ಮಾಡಿದ್ದೇ ಕಾಂಗ್ರೆಸ್ – ಬಿಜೆಪಿ ಸಾಧನೆ: ಹೆಚ್ ಡಿ ಕೆ
ಕಾಂಗ್ರೆಸ್- ಬಿಜೆಪಿ ರಾಜ್ಯದ ಜನರ ತೆರಿಗೆ ಹಣ ಲೂಟಿ ಮಾಡಿದ್ದನ್ನು ಬಿಟ್ಟರೆ ಬೇರೇನು ಸಾಧನೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವರವಲಯದ ಬೈಪಾಸ್ ರಸ್ತೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿಆರ್ ನರಸಿಂಹಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ – ಬಿಜೆಪಿ ಎರಡು ಪಕ್ಷಗಳಿಗೆ ಅಭಿವೃದ್ಧಿ ಬೇಕಾಗಿಲ್ಲ ರಾಜ್ಯದ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದರೆ ಜನ ಮುಂದೆ ನಮ್ಮ ಮಾತು ಕೇಳೋದಿಲ್ಲ…