ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ.
ವಿಜಯ ದರ್ಣಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 02 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ…