ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.
ಬೆಂಗಳೂರು: ಮೇ.20 ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಕರುನಾಡಿನ ಇಪ್ಪತ್ನಾಲ್ಕನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಜನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. “ಸಿದ್ದರಾಮಯ್ಯ ಎಂಬ ಹೆಸರಿನ ನಾನು.. ” ಸಿದ್ದರಾಮನಹುಂಡಿಯ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು…