ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್ 

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 22 : 2023ರ ಅಕ್ಟೋಬರ್ 2 ರಂದು 154ನೇ ಮಹಾತ್ಮ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “154ನೇ ಮಹಾತ್ಮ ಗಾಂಧಿ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ. 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 19: ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ…

Read More

ಭಾರತದಲ್ಲಿ ಬೇರು ಹೊಂದಿದವರು ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಕೇಂದ್ರ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್  ನವದೆಹಲಿ ಸೆಪ್ಟೆಂಬರ್ 21:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ‘ನಾರಿ ಶಕ್ತಿ ವಂದನ್ ಮಸೂದೆ-2023’ ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿಗೆ ಸಂಬಂಧಿಸಿದ 128 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು. ಬುಧವಾರ 454 ಮತಗಳು ಮತ್ತು ಮೂರನೇ ಎರಡರಷ್ಟು ಬಹುಮತದೊಂದಿಗೆ ಅಂಗೀಕಾರವಾಯಿತು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಾ, ‘ಭಾರತದಲ್ಲಿ ಬೇರು ಹೊಂದಿರುವವರು ಮಹಿಳೆಯರನ್ನು ಎಂದೂ ದುರ್ಬಲರೆಂದು…

Read More

ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್. ಎಸ್ ಭೋಸರಾಜು ಸೂಚನೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ 20  : ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು…

Read More

ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 20 : ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ನಡುವೆ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಅಂಬೇಡ್ಕರ್…

Read More

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ದೆಹಲಿ  ಸೆಪ್ಟೆಂಬರ್ 19 ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ. ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ. ಈ ಮಸೂದೆಗೆ ನಾರಿ ಶಕ್ತಿ ವಂದನ್ ಮಸೂದೆ ಎಂದು ಹೆಸರಿಡಲಾಗಿದೆ. ಶಾಸ್ತ್ರದಲ್ಲಿ ಹೇಳಿರುವಂತೆಯೇ…

Read More

ನಾರಿ ಶಕ್ತಿ ವಂದನ ಅಧಿನಿಯಮ ಮಹಿಳಾ ಮೀಸಲಾತಿ – ರಾಷ್ಟ್ರೀಯ ನವನಿರ್ಮಾಣಕ್ಕೊಂದು ಹೆಜ್ಜೆ.

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೆಪ್ಟೆಂಬರ್ 19 ಮಹಿಳಾ ಮೀಸಲಾತಿಯು ಸಮೃದ್ಧಭಾರತಕ್ಕೆ ಹೆಜ್ಜೆ. ಹಲವಾರು ವರ್ಷಗಳಿಂದ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಅಂತೂ ಇಂತೂ ಹೊಸ ಸಂಸತ್ತಿನಲ್ಲಿ ಮಂಗಳವಾರ ಮಂಡನೆಯಾಗಿದ್ದು ಅತ್ಯಂತ ಸಂತಸ. ಕಳೆದ ೩ ದಶಕದ ಹೋರಾಟಕ್ಕೆ ಸಂದ ಫಲ, ಕೇಂದ್ರ ಸಕಾರಕ್ಕೆ ಅದರಲ್ಲೂ ಪ್ರಧಾನಿ ಮೋದಿಯವರಿಗೆ ದೇಶದ ಸಮಸ್ತ ಮಹಿಳೆಯರಿಂದ ಧನ್ಯಾಭಿನಂದನೆಗಳು. ೨೦೧೪ ರಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ೩೩% ಮೀಸಲಾತಿಯನ್ನು ಭರವಸೆ ನೀಡಿತ್ತು. ೨೦೧೯ ರ ಕಾರ್ಯಸೂಚಿಯಲ್ಲಿ ಮತ್ತೇ ಭರವಸೆಯನ್ನು…

Read More

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಂಸದ ಬಿ.ಎನ್.ಬಚ್ಚೇಗೌಡ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17, ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು….

Read More

ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ವಿಜಯ ದರ್ಪಣ ನ್ಯೂಸ್. ಬಿಜಿಎಸ್ ನಗರ, ದೇವನಹಳ್ಳಿತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 16 . ಆರೋಗ್ಯ ಸೇವೆಗಳನ್ನು ಜನಮುಖಿಗೊಳಿಸುವ ನಿಟ್ಟಿನಲ್ಲಿ ಘನ ಭಾರತ ಸರ್ಕಾರವು ಸಾರ್ವತ್ರಿಕ ಜನ ಆರೋಗ್ಯ ಸೇವೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಾಗೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿದ್ದು, ಅಭಿಯಾನವನ್ನು ದೇಶದ ಘನ ವೆತ್ತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ರವರು ಸೆಪ್ಟೆಂಬರ್ 13ರಂದು ಚಾಲನೆ ನೀಡಿರುತ್ತಾರೆ.‌ ಅದೇ ರೀತಿ…

Read More

ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿಗ ಆಚರಣೆ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17 , ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಒಳಾಂಗಣದಲ್ಲಿ “ಶ್ರೀ ವಿಶ್ವಕರ್ಮ ಜಯಂತಿ”ಯನ್ನು ಆಚರಿಸಲಾಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ…

Read More