ವೀರಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಶೀಘ್ರ ಪುನರ್ ಸ್ಥಾಪಿಸಿ: ಉದ್ಘಾಟನಾ ಫಲಕ ಸ್ತoಬ ಕೂಡ ಸ್ಮಾರಕದಂತೆ, ಸಂರಕ್ಷಿಸಲು ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ.
ವಿಜಯ ದರ್ಪಣ ನ್ಯೂಸ್ ಮಡಿಕೇರಿ .ಆಗಸ್ಟ್ 25 ರಾಷ್ಟ್ರಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಹಾಗೂ ಸ್ಥಳೀಯ ಶಾಸಕ ಡಾ.ಮಂತರ್ ಗೌಡ…